ಊಟಕ್ಕೆಂದು ಮನೆಗೆ ಕರೆದು ಯುವತಿಯ ಸಾಮೂಹಿಕ ಅತ್ಯಾಚಾರ: ರಾಷ್ಟ್ರಮಟ್ಟದ ನಾಲ್ವರು ಈಜುಪಟುಗಳ ಬಂಧನ
ಬೆಂಗಳೂರು : ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ಯುವತಿಯನ್ನು ಊಟಕ್ಕೆಂದು ಮನೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ರಾಷ್ಟ್ರಮಟ್ಟದ ನಾಲ್ವರು ಈಜುಪಟುಗಳನ್ನು ಸಂಜಯನಗರ ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಮೂಲದ ರಜತ್ (23), ಶಿವ್ ರಾಣಾ (22), ದೇವ್ ಸರೋಯಿ (25), ಹಾಗೂ ಯೋಗೇಶ್ ಕುಮಾರ್ (26) ಬಂಧಿತರು.
ಆರೋಪಿಗಳು ಮಾ. 24ರಂದು ಪಶ್ಚಿಮ ಬಂಗಾಲ ಮೂಲದ ಯುವತಿಯನ್ನು ಸಂಜಯನಗರದ ಮನೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪಶ್ಚಿಮ ಬಂಗಾಳ ಮೂಲದ ಸಂತ್ರಸ್ತೆ ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ವಸಂತನಗರದಲ್ಲಿರುವ ಆಸ್ಪತ್ರೆ ಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಸಮೀಪದಲ್ಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದರೊಂದಿಗೆ ಯುವತಿ ಡೇಟಿಂಗ್ ಆ್ಯಪ್‌ನಲ್ಲಿ ತನ್ನ ಪ್ರೊಫೈಲ್ ಹಾಕಿಕೊಂಡಿದ್ದು, ಅದರಲ್ಲಿ ತನ್ನನ್ನು ಸಂಪರ್ಕಿಸುವ ಯುವಕರ ಜತೆ ಡೇಟಿಂಗ್‌ಗೆ ಹೋಗುತ್ತಿದ್ದರು ಎಂಬುದು ಗೊತ್ತಾಗಿದೆ.





