ಉಡುಪಿಯಲ್ಲಿ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅನುಮತಿ ನೀಡುವಂತೆ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಮುಸ್ಲಿಮ್ ವರ್ತಕರ ಮನವಿ
ಉಡುಪಿ: ಉಡುಪಿಯಲ್ಲಿ ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ಮಾಡದೆ ಅವಕಾಶ ನೀಡುವಂತೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಮುಸ್ಲಿಮ್ ವರ್ತಕರು ಮನವಿ ಮಾಡಿದರು.
ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಅಬೂಬಕ್ಕರ್ ಆತ್ರಾಡಿ ನೇತೃತ್ವದಲ್ಲಿ ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಮುಸ್ಲಿಂ ವರ್ತಕರು, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿರುವುದರಿಂದ ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವಿನಂತಿಸಿದರು.
ಉಡುಪಿಯಲ್ಲಿ ಹಿಜಾಬ್ ಹೋರಾಟದ ಪರಿಣಾಮ ಮುಸಲ್ಮಾನ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ನಡೆಯುತ್ತಿದೆ. ಯಾರಿಂದ ಅನ್ಯಾಯವಾಗಿದೆ ಅವರು ಸಮಸ್ಯೆ ಸರಿ ಮಾಡಿಕೊಳ್ಳಬೇಕು. ತಪ್ಪು ಮಾಡಿದವರನ್ನು ಆ ಸಮಾಜ ಶಿಕ್ಷಿಸಲಿ. ಮಾಡಿದ ತಪ್ಪನ್ನು ಆ ಸಮಾಜ ಪ್ರತಿಭಟಿಸಲಿ. ಒಬ್ಬರು ಮಾಡಿದ ಅನ್ಯಾಯ ಇಡೀ ಸಮಾಜಕ್ಕೆ ತಟ್ಟುತ್ತದೆ. ತಪ್ಪಿತಸ್ಥರಿಗೆ ಬೆನ್ನೆಲುಬಾಗಿ ನಿಲ್ಲದಿದ್ದರೆ ಹಿಂದೂ ಸಮಾಜಕ್ಕೆ ನೋವಾಗುವುದಿಲ್ಲ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಈ ವೇಳೆ ನುಡಿದರು.





