December 16, 2025

ತೀವ್ರ ಆರ್ಥಿಕ ಮುಗ್ಗಟ್ಟು: ಈ ದೇಶದಲ್ಲಿ ದಿನಕ್ಕೆ 10 ಗಂಟೆಗಳ ಕಾಲ ವಿದ್ಯುತ್ ಸ್ಥಗಿತ

0
Screenshot_2022-03-30-18-02-51-32_680d03679600f7af0b4c700c6b270fe7.jpg

ಕೊಲಂಬೊ: ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಶ್ರೀಲಂಕಾ ಸರ್ಕಾರ ದೇಶದಾದ್ಯಂತ ದಿನಕ್ಕೆ 7-10 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವ ಕ್ರಮವನ್ನು ಮತ್ತಷ್ಟು ದಿನಗಳ ಕಾಲ ವಿಸ್ತರಣೆ ಮಾಡಿದೆ. ಇದರಿಂದಾಗಿ ಜನ ಸಾಮಾನ್ಯರು ರಾತ್ರಿ ವೇಳೆ ಮತ್ತಷ್ಟು ಕಾಲ ಕತ್ತಲಲ್ಲೇ ಕಾಲ ಕಳೆಯುವ ಅನಿವಾರ್ಯತೆ ಎದುರಾಗಿದೆ.

ಜಲಜನಕ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಇಂಧನದ ಅಲಭ್ಯತೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕಳೆದೊಂದು ತಿಂಗಳಿನಿಂದ ಲಂಕಾದಲ್ಲಿ ದಿನಕ್ಕೆ 7 ಗಂಟೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ.

ತೀವ್ರ ವಿದೇಶಿ ವಿನಿಮಯ ಕೊರತೆಯ ಪರಿಣಾಮ ಶ್ರೀಲಂಕಾ ಸರ್ಕಾರ ಆರ್ಥಿಕ ಮತ್ತು ಇಂಧನ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇಂಧನದ ಕೊರತೆಯಿಂದ ಜನರು ಪೆಟ್ರೋಲ್ ಪಂಪ್ ಮತ್ತು ಸೀಮೆಎಣ್ಣೆ ಕೇಂದ್ರಗಳ ಮುಂದೆ ಸರತಿ ಸಾಲಿನಲ್ಲಿ ಕೂತಿದ್ದಾರೆ. ಪೆಟ್ರೋಲ್ ಪಂಪ್‌ಗಳು ಮತ್ತು ಸೀಮೆಎಣ್ಣೆ ಕೇಂದ್ರಗಳಿಗೆ ಲಂಕಾ ಸರ್ಕಾರ ಸೇನಾ ಭದ್ರತೆಯನ್ನು ಒದಗಿಸಿದೆ.

Leave a Reply

Your email address will not be published. Required fields are marked *

error: Content is protected !!