December 15, 2025

ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮತ್ತೆ ಸರಕಾರದ ವಶಕ್ಕೆ

0
image_editor_output_image-1669150333-1648706037619.jpg

ಉಡುಪಿ: ಖಾಸಗಿಯವರ ನಿರ್ವಹಣೆಗೆ ಒಳಪಟ್ಟಿದ್ದ ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ.

ಈ ಸಂಬಂಧ ಮಹತ್ತರ ನಿರ್ಧಾರವನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಆಸ್ಪತ್ರೆಗೆ ಪ್ರಸ್ತುತ ಇರುವ ಎಲ್ಲ ಸಿಬಂದಿ ಸಹಿತ 103 ಮಂದಿ ಹೆಚ್ಚುವರಿ ಸಿಬಂದಿ ಹಾಗೂ ವಾರ್ಷಿಕ ಅನುದಾನ 9.83 ಕೋ.ರೂ.ಗೆ ಅನುಮೋದನೆ ನೀಡಲಾಗಿದೆ.

ರಾಜ್ಯ ಸರಕಾರದ ಈ ಮಹತ್ವದ ನಿರ್ಧಾರವನ್ನು ಶಾಸಕ ಕೆ. ರಘುಪತಿ ಭಟ್‌ ಸ್ವಾಗತಿಸಿದ್ದಾರೆ. 250 ಬೆಡ್‌ಗಳ ಆಸ್ಪತ್ರೆಯಾಗಿ ಮೇಲ್ದರ್ಜೆ ಗೇರಿದ ಜಿಲ್ಲಾ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡದ ಶಿಲಾನ್ಯಾಸದ ಸಂದರ್ಭ ಮುಖ್ಯಮಂತ್ರಿಯವರು ಈ ಸಂಬಂಧ ಭರವಸೆ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!