ಎರಡು ತಲೆ, ಮೂರು ಕೈಯಿರುವ ಮಗುವಿಗೆ ಜನ್ಮ ನೀಡಿದ ಮಹಿಳೆ
ಇಂದೋರ್: ಮಹಿಳೆಯೊಬ್ಬರು ಎರಡು ತಲೆ, ಮೂರು ಕೈಗಳು ಮತ್ತು ಎರಡು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ರತ್ಲಾಮ್ ನಲ್ಲಿ ನಡೆದಿದೆ.
ನವಜಾತ ಶಿಶುವನ್ನು ಇಂದೋರ್ ನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಸ್ತುತ ಶಿಶುವೈದ್ಯ ವಿಭಾಗದ ಐಸಿಯುಗೆ ದಾಖಲಿಸಲಾಗಿದ್ದು, ಅಲ್ಲಿ ಶಿಶುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
“ಇದು ದಂಪತಿಗೆ ಮೊದಲ ಮಗು, ಮೊದಲು ಸೋನೋಗ್ರಫಿ ವರದಿಯಲ್ಲಿ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಇದು ಅಪರೂಪದ ಪ್ರಕರಣವಾಗಿದೆ” ಎಂದು ಮಗುವಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ ಬ್ರಜೇಶ್ ಲಹೋಟಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.





