ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರ ಇಂದಿನಿಂದ 250 ರೂ.ಗೆ ಹೆಚ್ಚಳ
ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ಇಂದಿನಿಂದ ₹250 ಹೆಚ್ಚಿಸಲಾಗಿದೆ.
ದೆಹಲಿಯಲ್ಲಿ 19 ಕೆ.ಜಿ. ಸಿಲಿಂಡರ್ ಬೆಲೆಯು ₹2,253 ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ₹2,205, ಕೋಲ್ಕತ್ತದಲ್ಲಿ ₹2,351, ಚೆನ್ನೈನಲ್ಲಿ ₹2,406 ಆಗಿದೆ. ಗೃಹ ಬಳಕೆಯ 14.2 ಕೆ.ಜಿ.ಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಏರಿಕೆ ಆಗಿಲ್ಲ.
ಜೆಟ್ ಇಂಧನ ಬೆಲೆಯಲ್ಲಿಯೂ ಏರಿಕೆ ಕಂಡುಬಂದಿದ್ದು, ಶೇ 2 ರಷ್ಟು ಹೆಚ್ಚಿಸಲಾಗಿದೆ.




