ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ವಾಮನ ಪೂಜಾರಿಗೆ 10 ವರ್ಷ ಜೈಲು, 30,000 ರೂ. ದಂಡ
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ 10 ವರ್ಷ ಜೈಲು ಮತ್ತು 30,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಸುರತ್ಕಲ್ ಸಮೀಪದ ಸಸಿಹಿತ್ಲು ನಿವಾಸಿ ವಾಮನ ಪೂಜಾರಿ (59) ಆರೋಪಿ.
2016ರ ಸೆಪ್ಟಂಬರ್ ತಿಂಗಳಲ್ಲಿ ಒಂದು ದಿನ ಹಗಲು ಹೊತ್ತಿನಲ್ಲಿ 16 ವರ್ಷ ಪ್ರಾಯದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ವಾಮನ ಪೂಜಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಯಾರಿಗೂ ವಿಷಯ ಹೇಳಬಾರದೆಂದು ಬೆದರಿಕೆ ಹಾಕಿದ್ದ. ಆ ಬಳಿಕ ಪದೇ ಪದೇ ಆತ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದು, ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದಳು. 2017ರ ಮಾ. 29ರಂದು ಖಾಸಗಿ ಆಸ್ಪತ್ರೆಯಲ್ಲಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.




