March 21, 2026

ಎಡಿಜಿಪಿರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ

0
image_editor_output_image1534630779-1648876279156.jpg

ಬೆಂಗಳೂರು: ಬೆಂಗಳೂರು ನಗರ ಕಮೀಷನರ್ ಆಗಿದ್ದ, ಹಾಗೂ ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ)ರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಪಡೆಯಲು ಸರ್ಕಾರ ಒಪ್ಪಿಗೆ ನೀಡಿದೆ.

ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಪಡೆಯಲು ಸರ್ಕಾರ ಅನುಮೋದನೆ ನೀಡಿದ ಹಿನ್ನಲೆಯಲ್ಲಿ ಭಾಸ್ಕರ್ ರಾವ್ ತಮ್ಮ ಸ್ವಯಂ ನಿವೃತ್ತಿ ಪತ್ರವನ್ನು ರವಾನಿಸಿದ್ದಾರೆ.

೧೯೯೦ ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿದ್ದ ಅವರು ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ ೨೦೨೧ ರಲ್ಲಿ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು.

1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದರು.

ಸ್ವಯಂ ನಿವೃತ್ತಿ ಪಡೆದಿರುವ ಭಾಸ್ಕರ್ ರಾವ್ ಅವರು ಮುಂಬರುವ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆಂದು ಎಂಬ ಸುದ್ದಿಗಳು ಕೇಳಿಬರುತ್ತಿವೆ.

Leave a Reply

Your email address will not be published. Required fields are marked *

error: Content is protected !!