February 1, 2026

ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹತ್ತಿಕ್ಕಲು ವಾರಾಂತ್ಯದಲ್ಲಿ ಕರ್ಫ್ಯೂ, ಸಾಮಾಜಿಕ ಮಾಧ್ಯಮದ ಮೇಲೆ ನಿರ್ಬಂಧ ಹೇರಿಕೆ

0
image_editor_output_image-64517799-1648963629845.jpg

ಕೊಲಂಬೊ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಅಧಿಕಾರಿಗಳು ವಾರಾಂತ್ಯದಲ್ಲಿ ದೇಶದಾದ್ಯಂತ ಕರ್ಫ್ಯೂ ವಿಧಿಸಿದ ನಂತರ, ಭಾನುವಾರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ವಿಧಿಸಿರುವುದಾಗಿ ವರದಿಯಾಗಿದೆ.

ಶ್ರೀಲಂಕಾ ದೇಶದಾದ್ಯಂತ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಟ್ವಿಟರ್, ಫೇಸ್‌ಬುಕ್, ವಾಟ್ಸಾಪ್, ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಂ ಸೇರಿದಂತೆ ಎಲ್ಲಾ ವೇದಿಕೆಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ’ ಎಂದು ಲಂಡನ್ ಮೂಲದ ನೆಟ್‌ಬ್ಲಾಕ್ಸ್ ತಿಳಿಸಿದೆ.

ಈ ಐದು ವೇದಿಕೆಗಳಲ್ಲಿ ಯಾವುದೂ ಕೂಡ ಸ್ಥಳೀಯ ಅಂತರ್ಜಾಲ ಸೇವಾ ಪೂರೈಕೆದಾರರಿಂದ ಸಂಪರ್ಕ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಎಎಫ್‌ಪಿ ದೃಢಪಡಿಸಿದೆ.

ಆಹಾರ, ಇಂಧನ ಮತ್ತು ಔಷಧಗಳ ಕೊರತೆಯಿಂದ ಬೇಸತ್ತಿರುವ ಜನರು ಸರ್ಕಾರದ ವಿರುದ್ಧ ಯೋಜಿತ ಪ್ರತಿಭಟನೆಗಳನ್ನು ನಡೆಸಲು ಮುಂದಾಗಿದ್ದಾರೆ. ಅದನ್ನು ತಡೆಯಲು ಶ್ರೀಲಂಕಾದ ಪೊಲೀಸರು ಶನಿವಾರ 36 ಗಂಟೆಗಳ ಕರ್ಫ್ಯೂ ಘೋಷಿಸಿದ್ದರು.

ಶನಿವಾರ ಸಂಜೆಯಿಂದ ಕರ್ಫ್ಯೂ ಜಾರಿಗೆ ಬಂದಿದ್ದು, ಸೋಮವಾರ ಬೆಳಿಗ್ಗೆ ಹಿಂತೆಗೆದುಕೊಳ್ಳಲಾಗುವುದು ಎಂದು ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿದ ಒಂದು ದಿನದ ನಂತರ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!