ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ತುಟ್ಟಿ: 13 ದಿನಗಳಲ್ಲಿ 8 ರೂ.ಹೆಚ್ಚಳ
ನವದೆಹಲಿ: ದೇಶದ ಜನತೆಗೆ ಪ್ರತಿ ದಿನ ತೈಲ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ ತಲಾ 80 ಪೈಸೆ ಹೆಚ್ಚಿಸಲಾಗಿದೆ. ಈ ಮೂಲಕ ಕಳೆದ 13 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 8 ರೂ.ಹೆಚ್ಚಳವಾಗಿದೆ.
ದೆಹಲಿಯಲ್ಲಿ ಸದ್ಯ ಪೆಟ್ರೋಲ್ ಬೆಲೆ ಲೀಟರ್‌ಗೆ ನಿನ್ನೆ 102.61 ರೂ. ಇದ್ದು, ಇಂದು 103.41 ರೂ.ಗೆ ಏರಿಕೆಯಾಗಿದೆ. ಹಾಗೆಯೇ ಡೀಸೆಲ್ ಲೀಟರ್‌ಗೆ ರೂ.93.87 ನಿಂದ 94.67 ರೂ.ಗೆ ಏರಿಕೆಯಾಗಿದೆ.




