February 2, 2026

ಗುಡಿಸಲಿಗೆ ಬೆಂಕಿ ತಗುಲಿ ಮಲಗಿದ್ದ ವ್ಯಕ್ತಿ ಸಜೀವ ದಹನ

0
n37371169216489790411606a487692168ef5048c0e26d511d81157cd4851b86c7c8047d73816440d315fbd.jpg

ಗಂಗೊಳ್ಳಿ: ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಲಗಿದ್ದ ವ್ಯಕ್ತಿಯೊಬ್ಬರು ಸಜೀವ ದಹನಗೊಂಡ ಧಾರುಣ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಭಾನುವಾರ ಸಂಭವಿಸಿದೆ.

ಗಂಗೊಳ್ಳಿ ಗ್ರಾಮದ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (42) ಮೃತಪಟ್ಟವರು.

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಭಾನುವಾರ ಬೆಳಗ್ಗೆ ಗಂಗೊಳ್ಳಿ ಬಂದರಿನಲ್ಲಿರುವ ಬೋಟಿನ ಸಮೀಪ ಹೋಗಿ ಮತ್ತೆ ಮನೆಯಲ್ಲಿ ಬಂದು ಮಲಗಿದ್ದರು. ಈ ಸಂದರ್ಭ ಬೆಳಗ್ಗೆ ಸುಮಾರು 8.30ರ ಹೊತ್ತಿಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗಣೇಶ ಖಾರ್ವಿ ಮಂಚದ ಮೇಲೆ ಮಲಗಿದ್ದಲ್ಲೆ ಸುಟ್ಟು ಸಜೀವ ದಹನಗೊಂಡಿದ್ದಾರೆ.

ಮೃತ ಗಣೇಶ್ ಹೊಸ ಮನೆ ಕಟ್ಟುತ್ತಿದ್ದು ಮನೆ ಸಮೀಪದಲ್ಲೇ ಪುಟ್ಟ ಗುಡಿಸಲಿನಲ್ಲಿ ಪತ್ನಿ ಜೊತೆ ವಾಸಿಸುತ್ತಿದ್ದರು. ಇವರ ಪತ್ನಿ ಬೆಳಗ್ಗೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!