February 2, 2026

ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬ್ಬಂದಿಗೆ ನಿವೃತ್ತಿ ಕಡ್ಡಾಯ

0
image_editor_output_image-932119420-1649049306773.jpg

ದಾವಣಗೆರೆ: ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬಂದಿಯನ್ನು ಕಡ್ಡಾಯವಾಗಿ ಕೆಲಸದಿಂದ ಬಿಡುಗಡೆಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ.

ಬಿಸಿಯೂಟ ಯೋಜನೆ ಆರಂಭವಾದಾಗಿನಿಂದ ಅಂದರೆ 2003-04ರಿಂದ ಇಲ್ಲಿಯವರೆಗೂ ವಯೋಮಾನ 60 ಮೀರಿದ್ದರೂ ಆರೋಗ್ಯವಂತರಾಗಿರುವ ಅಡುಗೆ ಸಿಬಂದಿ ಮಾನವೀಯತೆ ದೃಷ್ಟಿಯಿಂದ ಕೆಲಸದಲ್ಲಿ ಮುಂದುವರಿಸಿಕೊಂಡು ಬರಲಾಗಿತ್ತು.

ಆದರೆ, ಇದೇ ವರ್ಷ ಪ್ರಥಮ ಬಾರಿಗೆ ಇಲಾಖೆ ಈ ಕುರಿತು ಅಧಿಕೃತ ಆದೇಶ ಹೊರಡಿಸಿ, 60 ವರ್ಷ ಪೂರ್ಣಗೊಳಿಸಿದವರನ್ನು ಕಡ್ಡಾಯವಾಗಿ ಅಡುಗೆ ಕರ್ತವ್ಯದಿಂದ ಬಿಡುಗಡೆಗೊಳಿಸುತ್ತಿದೆ.

ಇಲಾಖೆಯ ಈ ಕ್ರಮದಿಂದ  ಅಂದಾಜು ಮೂರು ಸಾವಿರ ಮಂದಿ ಕೆಲಸ ಬಿಡಬೇಕಾಗಿದೆ. ಹಲವು ವರ್ಷ ಕೇವಲ ಗೌರವ ಸಂಭಾವನೆಯಲ್ಲೇ ಕೆಲಸ ಮಾಡಿದ್ದ ಇವರು ಯಾವುದೇ ನಿವೃತ್ತಿ ಸೌಲಭ್ಯವಿಲ್ಲದೇ ಕೆಲಸ ಬಿಡುವಂತಾಗಿದೆ.

Leave a Reply

Your email address will not be published. Required fields are marked *

error: Content is protected !!