ರಾಜ್ಯದಲ್ಲಿ ಬಿಸಿಲಿನ ತಾಪದಲ್ಲಿ ಏರಿಕೆ: ಗರಿಷ್ಠ 40.18ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು
ಬೆಂಗಳೂರು: ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಪ್ರಖರತೆ ತಾರಕಕ್ಕೇರುತ್ತಿದ್ದು, ವಿವಿಧ ಜಿಲ್ಲೆಯಲ್ಲಿ ಜ್ವರ, ತಲೆ ನೋವು, ಕಣ್ಣಿನ ಸಮಸ್ಯೆ ಸೇರಿದಂತೆ ಇತರೆ ಅನಾರೋಗ್ಯದಿಂದ ಬಳಲುತ್ತಿರುವ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ.
ಮಾರ್ಚ್ ತಿಂಗಳ ಮಧ್ಯ ಭಾಗದಿಂದ ಉಷ್ಣಾಂಶ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕನಿಷ್ಠ 19.5 ರಿಂದ ಗರಿಷ್ಠ 40.18ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ದಾಖಲಾಗುತ್ತಿದೆ.
ಕರಳುಬೇನೆ, ನಿರ್ಜಲೀಕರಣ, ವಾಂತಿ-ಭೇದಿ, ಕಣ್ಣಿನ ಉರಿ, ಚಿಕನ್ ಫಾಕ್ಸ್, ಟೈಫಾಯ್ಡ್, ಬಿಸಿಲಿನಿಂದ ತಲೆ ಸುತ್ತು, ಮೈಗ್ರೇನ್, ಸನ್ ಸ್ಟ್ರೋಕ್, ಮೂಗಿನಲ್ಲಿ ರಕ್ತ ಸುರಿಯುವುದು, ಅತಿಯಾದ ಸೂರ್ಯ ಕಿರಣಗಳಿಂದ ಚರ್ಮ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿವೆ.
ಬಿಸಿಲಿನಿಂದ ಉಂಟಾಗುವ ಕಾಯಿಲೆಗಳ ಪ್ರಮಾಣ ತೀವ್ರಗೊಳ್ಳುರುವ ಬಗ್ಗೆ ಆರೋಗ್ಯ ಇಲಾಖೆ ಸರ್ಕಾರಿ ಆಸ್ಪತ್ರೆಗಳಿಗೆ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸುತ್ತೋಲೆಯನ್ನು ಹೊರಡಿಸಿದೆ.




