March 19, 2026

ಬೈಕ್ ನಲ್ಲಿ ತ್ರಿಬಲ್ ರೈಡ್: ಎಸೆಸೆಲ್ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

0
image_editor_output_image-1774300790-1649055990218.jpg

ಕುಣಿಗಲ್ : ಒಂದೇ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡಿಕೊಂಡು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲ್ಲೂಕಿನ ಜಿನ್ನಾಗರ ಗ್ರಾಮದ ಬಳಿ ಘಟನೆ.

ನವೀನ್(16) ಸ್ಥಳದಲ್ಲೇ ಮೃತಪಟ್ಟ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಅಮೃತೂರಿಗೆ ಬರೆಯಲು  ಶರತ್,ದರ್ಶನ್ ಹಾಗೂ ನವೀನ್ ತ್ರಿಬಲ್ ರೈಡ್ ಮಾಡಿಕೊಂಡು ಹೋಗುತ್ತಿದ್ದರು.

ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ, ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶರತ್, ದರ್ಶನ್ ಗೆ ಗಾಯಾವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಡಾ.ರಾಜೇಂದ್ರಪ್ರಸಾದ್ ಹೈಸ್ಕೂಲ್ ನ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ. ಅಮೃತೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!