December 16, 2025

ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣ: ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ

0
n37397591216490586047581992b6531a388e0d75c20b848cb79c9752c6d60548f729f2363becf1f55353bd.jpg

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಅದಿರು ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣ ಸಂಬಂಧ ಇಲ್ಲಿನ ಕೋಕಾ ನ್ಯಾಯಾಲಯವು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಬೆಳಗಾವಿಯ ಕೋಕಾ ನ್ಯಾಯಾಲಯದಿಂದ ಏಪ್ರಿಲ್ 4, ಸೋಮವಾರ ತೀರ್ಪು ಹೊರಬಿದ್ದಿದ್ದು, ಎ-2 ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಎ-3 ಬೆಂಗಳೂರಿನ ಅಭಿ ಬಂಡಗಾರ್, ಎ-4 ಉಡುಪಿಯ ಗಣೇಶ್ ಭಜಂತ್ರಿ , ಎ-9 ಉಡುಪಿಯ ಬನ್ನಂಜೆ ರಾಜಾ ಸೇರಿ ನಾಲ್ಕು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಘಟನೆ ನಡೆದು ಬರೋಬ್ಬರಿ 9 ವರ್ಷಗಳ ಬಳಿಕ ತೀರ್ಪು ಪ್ರಕಟವಾಗಿದೆ. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿದೆ.

ಶಿಕ್ಷಣ ಹಾಗೂ ಸಹಕಾರ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಆರ್.ಎನ್. ನಾಯಕ್ ಅದಿರು ಉದ್ಯಮಿಯೂ ಆಗಿದ್ದರು. ಈ ಕಾರಣಕ್ಕೆ ಬನ್ನಂಜೆ ರಾಜಾ ಆರ್.ಎನ್. ನಾಯಕ್ ಅವರನ್ನು ‌ಟಾರ್ಗೆಟ್ ಮಾಡಿ 3 ಕೋಟಿ ರೂ. ಹಫ್ತಾ ನೀಡದಿದ್ದರೆ ಪ್ರಾಣ ತೆಗೆಯುವ ಬೆದರಿಕೆಯನ್ನು ಆರ್.ಎನ್. ನಾಯಕ್ ಗೆ ಹಾಕಿದ್ದ. ಈ ಸಂಬಂಧ ಆರ್.ಎನ್. ನಾಯಕ್ ಅಂಕೋಲಾ ಠಾಣೆಯಲ್ಲಿ ದೂರು ನೀಡಿದ್ದರು. ಹಫ್ತಾ ನೀಡದಿರುವುದಕ್ಕೆ 2013ರ ಡಿಸೆಂಬರ್ 21 ರಂದು ಆರ್.ಎನ್. ನಾಯಕ್ ಅವರನ್ನು ಹತ್ಯೆ ಮಾಡಲಾಗಿತ್ತು.

ಉತ್ತರ ಪ್ರದೇಶ ಮೂಲದ ಶಾರ್ಪ್ ಶೂಟರ್ ವಿವೇಕ್ ಉಪಾಧ್ಯಾಯ ಎಂಬಾತ ಆರ್.ಎನ್. ನಾಯಕ್ ಅವರನ್ನು ಗುಂಡಿಕ್ಕಿ ಕೊಲೆಗೈದಿದ್ದು, ಸ್ಥಳದಲ್ಲಿದ್ದ ಆರ್.ಎನ್ ನಾಯಕ್ ಅವರ ಗನ್ ಮ್ಯಾನ್ ರಮೇಶ್ ಗೌಡ ಕೂಡ ವಿವೇಕ್ ಉಪಾಧ್ಯಾಯನನ್ನು ಅಟ್ಟಿಸಿಕೊಂಡು ಹೋಗಿ ಗುಂಡಿಕ್ಕಿ ಹತ್ಯೆ ನಡೆಸಿದ್ದ.
2015ರ ಆಗಸ್ಟ್ 14ರಂದು ಭಾರತಕ್ಕೆ ಬನ್ನಂಜೆ ರಾಜ ಕರೆತರಲಾಗಿತ್ತು. 7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಬೆಳಗಾವಿ ಕೋಕಾ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದೆ.

Leave a Reply

Your email address will not be published. Required fields are marked *

error: Content is protected !!