ಬಂಟ್ವಾಳ: ಎರಡು ಕಾರುಗಳ ನಡುವೆ ಪರಸ್ಪರ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ
ಬಂಟ್ವಾಳ: ಎರಡು ಕಾರುಗಳ ನಡುವೆ ಪರಸ್ಪರ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣಾ ವ್ಯಾಪ್ತಿಯ ದಾಸಕೋಡಿ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಬಂಟ್ವಾಳ ನಿವಾಸಿಗಳಾದ ವಿಡಿಯೋಗ್ರಾಫರ್ ಸುಕುಮಾರ್ ಬಂಟ್ವಾಳ, ಪೈಂಟರ್ ವಿಠಲ, ಚಾಲಕ ಪುನೀತ್ ಹಾಗೂ ನಿತೀಶ್ ಗಾಯಗೊಂಡವರಾಗಿದ್ದಾರೆ.
ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರಿಗೆ ಬಂಟ್ವಾಳ ಕಡೆಯಿಂದ ಅತೀ ವೇಗದಿಂದ ಬರುತ್ತಿದ್ದ ಬ್ರೀಝಾ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಓಮ್ನಿಯಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯವಾಗಿದೆ.
ದಾಸಕೋಡಿ ಎಂಬಲ್ಲಿ ಬ್ರೀಝಾ ಕಾರು ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ದೂರಿದ್ದಾರೆ. ಘಟನೆ ನಡೆದ ಬಳಿಕ ಕೆಲ ಹೊತ್ತು ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗಿತ್ತು.
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಗೊಂಡ ನಾಲ್ವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.





