March 19, 2026

ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image978555555-1635574449412.jpg

ವಿಟ್ಲ: ಪೆರ್ಲ ನಿವಾಸಿ, ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಆಕೆಯ ಮನೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿಗಳ ಪುತ್ರಿ ಶ್ರಾವ್ಯ (20) ಎಂದು ಗುರುತಿಸಲಾಗಿದೆ.

ಶ್ರಾವ್ಯ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಅ.29 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.

ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನೆ ಬಗ್ಗೆ ಪೋಲಿಸರು ದೂರು ದಾಖಲಿಸಿಕೊಂದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!