ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಾನಾಪುರ ಗ್ರಾಮದ ಬಳಿ ಕಾರು ಪಲ್ಟಿಯಾಗಿ ತಂದೆ ಮಗ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸ್ವಾಮಿ ಗಾಯಕವಾಡ (30), ಬಾಬು ಗಾಯಕವಾಡ (55) ಸಾವಿಗೀಡಾದವರು. ಮಹಾರಾಷ್ಟ್ರದ ಅಕ್ಕಲಕೋಟ್ ನಿವಾಸಿಗಳಾಗಿದ್ದ ಇವರು, ಅಳಂದದಿಂದ ಅಕ್ಕಲಕೋಟ್ ಗೆ ಹೋಗುವಾಗ ಅಪಘಾತ ಸಂಭವಿಸಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.