ಬಾಲಿವುಡ್ ನಟಿಯ ಇನ್‌ಸ್ಟಾಗ್ರಾಂ ಖಾತೆ ಹ್ಯಾಕ್
ದಿಲ್ಲಿ: ಬಾಲಿವುಡ್ ನಟಿ ಯಾಮಿ ಗೌತಮ್ ಅವರ ಇನ್‌ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿರುವ ಸಾಧ್ಯತೆ ಇದೆ ಎಂದು ಅವರೇ ಟ್ವೀಟ್ ಮಾಡಿದ್ದಾರೆ.
ನಿನ್ನೆಯಿಂದ ನನ್ನ ಇನ್‌ಸ್ಟಾಗ್ರಾಂ ಖಾತೆ ಲಾಗಿನ್ ಆಗುತ್ತಿಲ್ಲ, ಬಹಶಃ ಯಾರೋ ಹ್ಯಾಕ್ ಮಾಡಿರುವ ಸಾಧ್ಯತೆ ಇದೆ ಎಂದಿದ್ದಾರೆ. ಈಗಾಗಲೇ ಇನ್‌ಸ್ಟಾಗ್ರಾಂ ತಂಡಕ್ಕೆ ಈ ಬಗ್ಗೆ ದೂರು ನೀಡಲಾಗಿದೆ. ಖಾತೆಯನ್ನು ಮರು ಸ್ಥಾಪನೆ ಮಾಡಿಕೊಡುವಂತೆ ಮನವಿ ಮಾಡಲಾಗಿದೆ ಎಂದು ಯಾಮಿ ಗೌತಮ್ ಟ್ವೀಟ್ ಮಾಡಿದ್ದಾರೆ.
ನನ್ನ ಖಾತೆ ಹ್ಯಾಕ್ ಆಗಿರುವ ಸಾಧ್ಯತೆ ಇರುವುದರಿಂದ ಅಭಿಮಾನಿಗಳು ನನ್ನ ಖಾತೆಯ ಹೆಸರಿನಿಂದ ಬರುವ ಲಿಂಕ್, ವಿಡಿಯೊಗಳನ್ನು ಕ್ಲಿಕ್ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.





