ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಬುಕ್ಕಿಯ ಬಂಧನ
ಬೆಳಗಾವಿ : ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಪಂಜಾಬ್ ಕಿಂಗ್ಸ್ ಮಧ್ಯೆ ನಡೆದ ಐಪಿಎಲ್ ಕ್ರಿಕೆಟ್ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಬುಕ್ಕಿಯನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಇಲ್ಲಿಯ ಮಜಗಾವಿಯ ಪವನ್ ಕಾಕತ್ಕರ್(32) ಎಂಬ ಬೆಟ್ಟಿಂಗ್ ಬುಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 15,500 ರೂ. ನಗದು ಹಣ, ಬೆಟ್ಟಿಂಗ್ ವಿವರ ಬರೆದ ಕಾಗದ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಸಿಸಿಬಿ ಇನ್ಸ್ಪೆಕ್ಟರ್ ನಿಂಗನಗೌಡ ಪಾಟೀಲ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಈ ಕುರಿತು ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





