ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಪಿ ಎಫ್ ಐ ಕಾರ್ಯಕರ್ತರಿಗೆ ತರಬೇತಿ ವಿಚಾರ: ಇಬ್ಬರು ಸಿಬ್ಬಂದಿಗಳು ಅಮಾನತು
ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರಿಗೆ ಅಗ್ನಿಶಾಮಕ ತರಬೇತಿ ನೀಡಿದ ಇಬ್ಬರು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಮತ್ತು ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಇನ್ನಿಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಮಾ. 30ರಂದು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಆಲುವಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಭಾಗವಾಗಿ ಪಿಎಫ್‌ಐ ಕಾರ್ಯಕರ್ತರಿಗೆ ತರಬೇತಿ ಆಯೋಜಿಸಿದ್ದರು ಎಂದು ವರದಿಯಾಗಿದೆ.
ತರಬೇತಿ ಅವಧಿಯ ಫೋಟೋಗಳು ವೈರಲ್ ಆಗಿತ್ತು. ಈ ಬಗ್ಗೆ ರಾಜ್ಯ ಅಗ್ನಿಶಾಮಕ ದಳದ ಮುಖ್ಯಸ್ಥೆ ಬಿ.ಸಂಧ್ಯಾ ತನಿಖೆಗೆ ಆದೇಶಿಸಿದ್ದಾರೆ.
ಬಿಜೆಪಿಯ ಕೆ. ಸುರೇಂದ್ರನ್ ಟ್ವಿಟರ್‌ನಲ್ಲಿ ಈ ಕುರಿತು ಟ್ವೀಟ್ ಮಾಡಿ ವಿರೋಧವನ್ನು ವ್ಯಕ್ತಪಡಿಸಿದ್ದರು




