December 16, 2025

ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಶೀಘ್ರದಲ್ಲೇ ಅಳವಡಿಕೆ: ಸುಳಿವು ನೀಡಿದ ಸಚಿವ ಬಿ.ಸಿ.ನಾಗೇಶ್

0
Screenshot_2022-04-05-11-33-19-37_680d03679600f7af0b4c700c6b270fe7.jpg

ಬೆಂಗಳೂರು: ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಮತ್ತು ಪಂಚತಂತ್ರದ ಪಾಠಗಳನ್ನು ಶೀಘ್ರದಲ್ಲೇ ಅಳವಡಿಸಲಾಗುತ್ತದೆ ಎಂಬ ಸುಳಿವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಕರ್ನಾಟಕ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ಸ್ ಆಫ್ ಸ್ಕೂಲ್ಸ್ (KAMS) ನ ಪ್ರಧಾನ ಕಾರ್ಯದರ್ಶಿ ಶಶಿ ಕುಮಾರ್ ಅವರು. ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲು ಎರಡು ತಿಂಗಳಿಗಿಂತ ಕಡಿಮೆ ಸಮಯವಿದೆ, ಶೀಘ್ರದಲ್ಲಿಯೇ ಸರ್ಕಾರ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ. ಪ್ರಸ್ತುತ ಇರುವ ಪಠ್ಯಪುಸ್ತಕಗಳು ಹಳೆಯದಾಗಿದೆ, ಪಾವತಿ ಮಾಡಿದ ನಂತರವೂ ಹಲವು ಪುಸ್ತಕಗಳನ್ನು ನೀಡಲಾಗಿಲ್ಲ ಎಂದು ಹೇಳಿದರು.

ಪಠ್ಯಪುಸ್ತಕಗಳ ಪಡೆಯಲು ವಿಳಂಬವಾಗುತ್ತಿರುವುದರಿಂದ ಖಾಸಗಿ ಶಾಲೆಗಳು ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಹಲವು ಪಠ್ಯಕ್ರಮಗಳನ್ನು ಪರಿಷ್ಕರಿಸಲಾಗಿಲ್ಲ.

“ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCF) ಮತ್ತು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (NCERT) ಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಶಿಕ್ಷಣದ ಗುಣಮಟ್ಟ ಕಾಯ್ದುಕೊಳ್ಳಲು ಪ್ರಯತ್ನಗಳ ಮಾಡುತ್ತಿದ್ದಾರೆಂದೆನಿಸುತ್ತಿಲ್ಲ ಎಂದು ತಿಳಿಸಿದರು.

ಕೇವಲ ಖಾಸಗಿ ಶಾಲೆಗಳಷ್ಟೇ ಅಲ್ಲದೆ, ಸರ್ಕಾರಿ ಶಾಲೆಗಳೂ ಕೂಡ ಪಠ್ಯಪುಸ್ತಕಗಳ ಖರೀದಿಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!