ಆಝಾನ್ ವಿಚಾರದಲ್ಲಿ ಸರ್ಕಾರ ಹೊಸ ಕಾನೂನು ತಂದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ಬೆಂಗಳೂರು: ಆಝಾನ್ ವಿಚಾರದಲ್ಲಿ ಸರ್ಕಾರ ಹೊಸ ಕಾನೂನು ತಂದಿಲ್ಲ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಯಾವುದೇ ಸಂಘಟನೆಯಾಗಲಿ ಕಾನೂನನ್ನು ಕೈಗೆತ್ತಿಕೊಳ್ಳದೆ ಶಾಂತಿ-ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಳ್ಳುತ್ತೇವೆ, ಸರ್ಕಾರದ ದೃಷ್ಟಿಯಲ್ಲಿ ಎಲ್ಲಾ ಜಾತಿ-ಧರ್ಮದವರು ಒಂದೇ ಎಂದು ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.





