ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ: ಸಿಎಂ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ‘ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವೂ ಕೂಡ ತನ್ನ ನೌಕರರಿಗೆ ಶೇ 3 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು.





