March 19, 2026

ಆರ್.ಎಸ್.ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

0
image_editor_output_image-42546516-1649177479502

ಬಂಟ್ವಾಳ: ಆರ್.ಎಸ್.ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎ.5 ರಂದು ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಇರುವಾಗ ಹಠತ್ ಆಗಿ ಆರೋಗ್ಯದಲ್ಲಿ ಏರುಪೇರಾಗಿತ್ತು, ಕೂಡಲೇ ಮಂಗಳೂರಿನ ಏ.ಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ನಡೆದಿದೆ ಎಂದು ಭಟ್ ಅವರ ಆಪ್ತ ಮೂಲಗಳು ತಿಳಿಸಿವೆ.

70 ವರ್ಷ ದಾಟಿದರೂ ಆರೋಗ್ಯದಲ್ಲಿ ಲವಲವಿಕೆಯಿಂದ ಇದ್ದರೂ ಭಟ್ ಅವರು ಯುವಕರೇ ನಾಚುವಂತೆ ಆರೋಗ್ಯ ಕಾಪಡಿಕೊಂಡಿದ್ದರು.

ಆರ್.ಎಸ್.ಎಸ್ ಹಿರಿಯ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ , ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತಿದ್ದಾರೆ.

Leave a Reply

Your email address will not be published. Required fields are marked *

error: Content is protected !!