March 19, 2026

ನಕಲಿ ಸುದ್ದಿಗಳ ಪ್ರಸಾರ ಆರೋಪ: 22 ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಿರ್ಬಂಧಿಸಿದ ಕೇಂದ್ರ

0
Screenshot_2022-04-06-04-23-33-08_ae93b0d4e668ae3b9e42de29105ee7f0.jpg

ನವದೆಹಲಿ: ಭಾರತ ವಿರೋಧಿಪ್ರಚಾರ, ನಕಲಿ ಸುದ್ದಿಗಳನ್ನು ಹರಡುತ್ತಿರುವ ಆರೋಪದ ಮೇಲೆ 22 ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಿರ್ಬಂಧಿಸಲು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆದೇಶಿಸಿದೆ.

ಇವುಗಳಲ್ಲಿ 18 ಭಾರತೀಯ ಯೂಟ್ಯೂಬ್ ಸುದ್ದಿ ಚಾನೆಲ್‌ಗಳು ಹಾಗೂ ನಾಲ್ಕು ಪಾಕಿಸ್ತಾನಕ್ಕೆ ಸೇರಿದ್ದಾಗಿವೆ. ಕಳೆದ ವರ್ಷ ಫೆಬ್ರವರಿಯಲ್ಲಿ ಐಟಿ ನಿಯಮಗಳು– 2021 ರ ಅಧಿಸೂಚನೆಯ ನಂತರ ಭಾರತೀಯ ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್‌ಗಳ ವಿರುದ್ಧ ಕ್ರಮ ಕೈಗೊಂಡಿರುವುದು ಇದೇ ಮೊದಲು ಎಂದು ಸಚಿವಾಲಯ ತಿಳಿಸಿದೆ.

22 ಯೂಟ್ಯೂಬ್ ಚಾನೆಲ್‌ಗಳು, ಮೂರು ಟ್ವಿಟರ್ ಖಾತೆಗಳು, ಒಂದು ಫೇಸ್‌ಬುಕ್ ಖಾತೆ ಮತ್ತು ಒಂದು ಸುದ್ದಿ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲು ಇಲಾಖೆ ಸೋಮವಾರ ಆದೇಶ ಹೊರಡಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!