ಇನ್ಮುಂದೆ ಸರ್ಕಾರಿ ಮಾದರಿ ಶಾಲೆಗಳಲ್ಲಿ ‘ಸ್ಪೋಕನ್ ಇಂಗ್ಲೀಷ್’ ಕ್ಲಾಸ್: ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಬೆಂಗಳೂರು: ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ ‘ಸ್ಪೋಕನ್ ಇಂಗ್ಲೀಷ್’ ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉಳಿಸಿ: ಕನ್ನಡ ಬೆಳೆಸಿ’ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಸರ್ಕಾರಿ ಮಾದರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ಕಲಿಸಲಾಗುತ್ತದೆ ಎಂದು ತಿಳಿಸಿದರು.




