ಜೂನ್ ಅಂತ್ಯದಲ್ಲಿ ಜಿಲ್ಲೆಗೊಂದು ಗೋಶಾಲೆ ಅನುಷ್ಠಾನವಾಗದಿದ್ದರೆ ಅಧಿಕಾರಿಗಳಿಗೆ ದಂಡ ಖಚಿತ: ಸಚಿವ ಪ್ರಭು ಚವ್ಹಾಣ್
ಬೆಂಗಳೂರು : ಜೂನ್ 23ರ ಒಳಗಾಗಿ ಜಿಲ್ಲೆಗೊಂದು ಗೋಶಾಲೆ ಯೋಜನೆ ಅನುಷ್ಠಾನವಾಗದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಇಲಾಖಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಗುಡುಗಿದ್ದಾರೆ.
ವಿಕಾಸಸೌಧದಲ್ಲಿ ಪಶುಸಂಗೋಪನೆ ಇಲಾಖೆ ಆಯುಕ್ತರು ನಿರ್ದೇಶಕರು ಮತ್ತು ಉಪನಿರ್ದೇಶಕರ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಪ್ರತಿ ಜಿಲ್ಲೆಯಲ್ಲಿ ಜಿಲ್ಲೆಗೊಂದು ಗೋಶಾಲೆ ಅನುಷ್ಠಾನ ಯಾವ ಹಂತದಲ್ಲಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದರು.




