ನಂದಿನಿ ಹಾಲಿಗೆ ಪ್ರತಿ ಲೀ.ಗೆ 5 ರೂ. ಹೆಚ್ಚಳ
ಬೆಂಗಳೂರು: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿನ ದರ ಏರಿಸಲು 1 ತಿಂಗಳಿಂದ ನಿರಂತರ ಸರ್ಕಸ್ ಮಾಡಲಾಗುತ್ತಿದೆ. ಈಗಾಗಲೇ KERC ವಿದ್ಯುತ್ ದರ ಏರಿಕೆಗೆ ಅಸ್ತು ಎಂದಿದೆ. ಹೀಗಾಗಿ ಈಗ ಹಾಲಿನ ದರ ಏರಿಸಲು ಹಾಲು ಒಕ್ಕೂಟಗಳು ಪಟ್ಟು ಹಿಡಿದಿವೆ.
ವಿದ್ಯುತ್ ದರದಂತೆ ಹಾಲಿನ ದರವನ್ನೂ ಏರಿಸಲು ಒತ್ತಾಯ ಕೇಳಿ ಬಂದಿದೆ. ಪ್ರತಿ ಲೀ.ಗೆ 5 ರೂ. ಏರಿಸಲು ಹಾಲು ಒಕ್ಕೂಟಗಳು ಮನವಿ ಮಾಡಿವೆ. 14 ಹಾಲು ಒಕ್ಕೂಟಗಳು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಲು ಸಿದ್ದತೆ ಮಾಡಿಕೊಂಡಿವೆ.
ಇದೇ ಏಪ್ರಿಲ್ 10ರೊಳಗೆ ಬೊಮ್ಮಾಯಿ ಭೇಟಿ ಮಾಡಲು ನಿರ್ಧಾರ ಮಾಡಿವೆ. ಈಗಾಗಲೇ ಈ ಬಗ್ಗೆ KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕ ಸತೀಶ್ ಜೊತೆ ಚರ್ಚೆ ನಡೆಸಿದ್ದಾರೆ. ಇನ್ನೆರಡು ದಿನಗಳಲ್ಲಿ ಸಿಎಂ ಜತೆಗೆ ಚರ್ಚೆ ಮಾಡುವ ಭರವಸೆ.




