February 3, 2026

ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

0
image_editor_output_image1757763045-1649311440051.jpg

ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)-2020 ಅನ್ನು ಅನುಷ್ಠಾನಗೊಳಿಸುವ ಭಾಗವಾಗಿ ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯ ವಿಷಯವನ್ನಾಗಿ ಮಾಡುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ.

ಪದವಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾದಂತಾಗಿದೆ. ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ  ಟ್ರಸ್ಟ್‌ ಸೇರಿ ಕೆಲ ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರಿದ್ದ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿ ಆದೇಶಿಸಿದೆ.

‘ರಾಷ್ಟ್ರೀಯ ಶಿಕ್ಷಣ ನೀತಿಯಡಿ  ಪ್ರಾದೇಶಿಕ ಭಾಷೆ ಕಲಿಕೆ ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿರುವುದರಿಂದ ಪದವಿ ಹಂತದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2021ರ ಆ.7 ಹಾಗೂ ಸೆ.15ರಂದು ಹೊರಡಿಸಿರುವ ಆದೇಶ ಜಾರಿಗೆ ತಡೆಯಾಜ್ಞೆ ನೀಡಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿ ವಿಚಾರಣೆ ಮುಂದೂಡಿತು.

Leave a Reply

Your email address will not be published. Required fields are marked *

error: Content is protected !!