February 3, 2026

11 ಸಾವಿರ ರೂ. ಹಣ ಕಳೆದುಕೊಂಡಿದ್ದಕ್ಕೆ ಮಗನನ್ನೇ ಬೆಂಕಿ ಹಚ್ಚಿ ಕೊಂದ ತಂದೆ

0
Screenshot_2022-04-07-14-04-06-38_680d03679600f7af0b4c700c6b270fe7.jpg

ಬೆಂಗಳೂರು: ಹನ್ನೆರಡು ಸಾವಿರ ರೂ. ಹಣ ಕಳೆದುಕೊಂಡಿದ್ದಕ್ಕೆ ಸ್ವಂತ ಮಗನನ್ನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ನಡೆದಿದೆ.

ಬೆಂಗಳೂರಿನ ಆಜಾದ್ ನಗರದಲ್ಲಿ ಈ ಘಟನೆ ನಡೆದಿದ್ದು ಸ್ಥಳೀಯ ನಿವಾಸಿ ಸುರೇಂದ್ರ ಎಂಬವರು ತಮ್ಮ ಮಗ ಅರ್ಪಿತ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಮಾನವೀಯ ಘಟನೆಯ ದೃಶ್ಯವು ಸಿಸಿಟಿವಿ ಯಲ್ಲಿ ಸೆರೆಯಾಗಿದೆ.

ಕಳೆದ ವಾರ ಅರ್ಪಿತ್ 12 ಸಾವಿರ ರೂ. ಕಳೆದುಕೊಂಡಿದ್ದಕ್ಕೆ ಸುರೇಂದ್ರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ತಕ್ಷಣವೇ ಸ್ಥಳೀಯರು ಅರ್ಪಿತ್‌ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!