August 21, 2026

ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 2 ಕೋಟಿ ರೂ. ನಗದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು: ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

0
Screenshot_2022-04-08-04-28-29-68_680d03679600f7af0b4c700c6b270fe7.jpg

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ವಿನ್ಯಾಸಕಾರನ ಮನೆಗೆ ನುಗ್ಗಿ ಬರೋಬರಿ ಎರಡು ಕೋಟಿ ರೂ. ನಗದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಕಳ್ಳರು ಕುಮಾರಸ್ವಾಮಿ ಲೇಔಟ್‌ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸುಬ್ರಹ್ಮಣ್ಯಪುರ ನಿವಾಸಿ ಸುನೀಲ್‌ ಕುಮಾರ್‌ ಅಲಿಯಾಸ್‌ ತೊರೆ(35) ಮತ್ತು ಬೆಂಗಳೂರು ಗ್ರಾಮಾಂತರದ ಕೆಬ್ಬೆಹಳ್ಳಿ ನಿವಾಸಿ ದಿಲೀಪ್‌(23) ಬಂಧಿತರು.

ಆರೋಪಿಗಳಿಂದ 1.88 ಕೋಟಿ ರೂ. ಮೌಲ್ಯದ ನಗದು, 12 ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣ  ಜಪ್ತಿ ಮಾಡಲಾಗಿದೆ. ಆರೋಪಿಗಳು ಸಂದೀಪ್‌ ಲಾಲ್‌ ಎಂಬವರ ಮನೆಗೆ ನುಗ್ಗಿ ಎರಡು ಕೋಟಿ ರೂ. ನಗದು, 190 ಗ್ರಾಂ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

Leave a Reply

Your email address will not be published. Required fields are marked *

You may have missed

error: Content is protected !!