February 2, 2026

ಮದುವೆಯ ಆಮಂತ್ರಣ ಪತ್ರಿಕೆ ಕೊಡಲು ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತ: ಮದುಮಗ ಸೇರಿ ಇಬ್ಬರು ಮೃತ್ಯು

0
image_editor_output_image1203996256-1649372501054.jpg

ಕಲಬುರಗಿ : ಮದುವೆಯ ಆಮಂತ್ರಣ ಪತ್ರಿಕೆ ಕೊಡಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮದುಮಗ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ಸಂಭವಿಸಿದೆ.

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ದೇವೇಂದ್ರಪ್ಪ (30) ಹಾಗೂ ವಸ್ತಾರಿ ಗ್ರಾಮದ ಗುರುರಾಜ ( 30) ಎನ್ನುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೇವೇಂದ್ರಪ್ಪ ಅವರ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ಸಂಬಂಧಿಕರಿಗೆ ಮದುವೆ ಆಮಂತ್ರಣ ಪತ್ರ ಕೊಡಲು ಜೇರಟಗಿಯತ್ತ ತೆರಳುತ್ತಿದ್ದರು.

ವಾಹನವೊಂದನ್ನು ಓವರ್ ಟೇಕ್ ಮಾಡಿಕೊಂಡು ಬಂದ ವಿಜಯಪುರ ಜಿಲ್ಲೆಗೆ ಸೇರಿದ ಕಾರು ಎದುರಿಗೆ ಬಂದ ಬೈಕ್‌ ಗೆ ಡಿಕ್ಕಿ ಹೊಡೆಯಿತು.  ಪರಿಣಾಮ ಓರ್ವನ ದೇಹ ಸುಮಾರು 300 ಮೀಟರ್ ದೂರದವರೆಗೂ ಎಳೆದುಕೊಂಡು ಹೋಗಿದ್ದರಿಂದ ಛಿದ್ರವಾಗಿದೆ.

Leave a Reply

Your email address will not be published. Required fields are marked *

error: Content is protected !!