ಐಪಿಎಲ್ ಪಂದ್ಯದ ವೇಳೆ ನೀತಿ ಸಂಹಿತೆ ಉಲ್ಲಂಘನೆ: ಜಸ್ಪ್ರೀತ್ ಬುಮ್ರಾ, ನಿತೀಶ್ ರಾಣಾಗೆ ಶೇ. 10ರಷ್ಟು ದಂಡ
ಪುಣೆ: ಐಪಿಎಲ್ ಪಂದ್ಯದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಮುಂಬೈ ಇಂಡಿಯನ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ಬ್ಯಾಟ್ಸ್‌ಮನ್ ನಿತೀಶ್ ರಾಣಾ ಅವರಿಗೆ ದಂಡ ವಿಧಿಸಲಾಗಿದೆ.
ಜಸ್ಪ್ರೀತ್ ಬುಮ್ರಾ ಅವರು ಪುಣೆಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ವಾಗ್ದಂಡನೆ ಹಾಗೂ ಪಂದ್ಯ ಶುಲ್ಕದ ಶೇ.10ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.




