February 3, 2026

ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟ: ಇಬ್ಬರು ಮಕ್ಕಳ ಸಹಿತ ದಂಪತಿ ಸಜೀವ ದಹನ

0
image_editor_output_image-1870197797-1649396456633.jpg

ವಿಜಯನಗರ: ಎಸಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಕ್ಕಳ ಸಹಿತ ದಂಪತಿ ಸಜೀವ ದಹನವಾಗಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಸಂಭವಿಸಿದೆ.

ಮೃತರನ್ನು ವೆಂಕಟ್ ಪ್ರಶಾಂತ್ (42), ಚಂದ್ರಕಲಾ (28), ಅದ್ವಿಕ್ (16), ಪ್ರೇರಣಾ (8) ಎಂದು ಗುರುತಿಸಲಾಗಿದೆ. ಇದೇ ಮನೆಯಲ್ಲಿ ವಾಸವಿದ್ದ ರಾಘವೇಂದ್ರ ಶೆಟ್ಟಿ ಹಾಗೂ ಅವರ ಪತ್ನಿ ರಾಜಶ್ರೀ ಅವರು ಅಪಾಯದಿಂದ ಪಾರಾಗಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡಿರಬಹುದು ಎಂದು ಶಂಕಿಸಲಾಸ್ಗಿದ್ದು, ಅಗ್ನಿ ಅವಘಡ ಸಂಭವಿಸಿದಾಗ ದಂಪತಿ ಮತ್ತು ಮಕ್ಕಳು ಹೊರಬರಲಾಗದೆ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮರಿಯಮ್ಮನಹಳ್ಳಿಯ ರಾಘವೇಂದ್ರ ಶೆಟ್ಟಿ ಎಂಬುವವರ ಮನೆಯಲ್ಲಿ ರಾತ್ರಿ ಹೊತ್ತು ಮಲಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!