February 2, 2026

ಉಪ್ಪಿನಂಗಡಿ: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ

0
Screenshot_2022-04-08-11-08-49-05_680d03679600f7af0b4c700c6b270fe7.jpg

ಉಪ್ಪಿನಂಗಡಿ: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಗದಗ ಮೂಲದ ಯುವಕನೋರ್ವ ಆತ್ಮಹತ್ಯೆಗೈದ ಘಟನೆ ಗುರುವಾರ ಸಂಜೆ ಸಂಭವಿಸಿದೆ.

ಮೂಲತಃ ಗದಗ ಜಿಲ್ಲೆಯ ರೋಣ ಮನೆ ನಿವಾಸಿ ಭರಮಪ್ಪ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕೂಲಿ ಕಾರ್ಮಿಕನಾಗಿದ್ದು, ತನ್ನ ಕುಟುಂಬ ಸಮೇತ ತೆಕ್ಕಾರು ಗ್ರಾಮದ ಸರಳೀಕಟ್ಟೆಯ ಮೂಡಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಸ್ಥಳೀಯ ನಿವಾಸಿಯೋರ್ವರ ತೋಟಕ್ಕೆ ಕೆಲಸಕ್ಕೆ ಹೋಗುತ್ತಿದ್ದ. ವಿಪರೀತ ಮದ್ಯವ್ಯಸನಿಯಾಗಿದ್ದು ಧರ್ಮಸ್ಥಳ ಮದ್ಯವರ್ಜನ ಶಿಬಿರದ ಫಲಾನುಭವಿಯಾಗಿದ್ದರು ಎಂದು ತಿಳಿದುಬಂದಿದೆ.

ಕೂಲಿ ಕೆಲಸಕ್ಕೆಂದು ಹೋದವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತ್ನಿ ಗೀತಾ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!