March 19, 2026

ಹಂಪನಕಟ್ಟೆಯ ಬಳಿ ಹೊತ್ತಿ ಉರಿದ ಖಾಸಗಿ ಬಸ್

0
image_editor_output_image-1152588242-1649410800674.jpg

ಮಂಗಳೂರು: ಖಾಸಗಿ ಬಸ್ಸೊಂದು ಹೊತ್ತಿ ಉರಿದ ಘಟನೆ ನಗರದ ಹಂಪನಕಟ್ಟೆಯ ಬಳಿ ನಡೆದಿದೆ.

ಪ್ರಯಾಣಿಕರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಮಂಗಳೂರು ನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಸುರತ್ಕಲ್ ಕೃಷ್ಣಾಪುರದಿಂದ ನಗರದ ಸ್ಟೇಟ್ ಬ್ಯಾಂಕ್ ಗೆ ಬರುತ್ತಿದ್ದಾಗ ಬೈಕ್ ವೊಂದು ಅಡ್ಡ ಬಂದಿದ್ದು, ಈ ವೇಳೆ ಬಸ್ಸಿನ ಟಯರ್ ನಡಿ ಬೈಕ್ ಸಿಲುಕಿಕೊಂಡು ಬೆಂಕಿ ಹೊತ್ತಿಕೊಂಡಿದೆ.

ಬಸ್ ನಲ್ಲಿ 15ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!