September 25, 2026

ಹುಬ್ಬಳ್ಳಿಯಿಂದ ಮಂಗಳೂರು, ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭ

0
Screenshot_2022-04-09-04-38-36-47_680d03679600f7af0b4c700c6b270fe7.jpg

ನವದೆಹಲಿ : ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭಸುದ್ದಿ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭವಾಗಲಿದೆ.

ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭಿಸಲು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿಯವರು ಇಂಡಿಗೋ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದರು. ಅದರಂತೆ ಸಚಿವರ ಮನವಿಗೆ ಸ್ಪಂದಿಸಿದ ಇಂಡಿಗೋ ಸಂಸ್ಥೆ ಹುಬ್ಬಳ್ಳಿಯಿಂದ ಮಂಗಳೂರು ಹಾಗೂ ಮೈಸೂರಿಗೆ ಮೇ. 1ರಿಂದ ಸೇವೆ ಒದಗಿಸುವುದಾಗಿ ತಿಳಿಸಿದೆ.

 

ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರಗಳಿಗೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!