ಅಭಿಮಾನಿಗಳ ಒತ್ತಾಯದ ಮೇರೆಗೆ ರವಿವಾರ ಅಂತ್ಯಕ್ರಿಯೆ:
ಎಲ್ಲರೂ ಶಾಂತಿ ಕಾಪಾಡಬೇಕು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಭಾನುವಾರ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ”ಅಭಿಮಾನಿಗಳ ಒತ್ತಾಯದ ಮೇರೆಗೆ ಇಂದಿನ ಬದಲು ನಾಳೆ ಅಂತ್ಯಕ್ರಿಯೆ ನಡೆಸಲಾಗುವುದು. ಎಲ್ಲರೂ ಶಾಂತಿ ಕಾಪಾಡಬೇಕು” ಎಂದು ಮನವಿ ಮಾಡಿದರು.
ಅಂತಿಮ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿರುವ ಲಕ್ಷಾಂತರ ಅಭಿಮಾನಿಗಳು, ಕನ್ನಡ ಚಿತ್ರರಂಗದ ಗಣ್ಯರು ಮಾತ್ರವಲ್ಲದೆ ತೆಲುಗು ಚಿತ್ರರಂಗದ ಗಣ್ಯರು ಆಗಮಿಸಿ ತೀವ್ರ ಕಂಬನಿ ಮಿಡಿದಿದ್ದಾರೆ. ತೆಲುಗಿನ ಪ್ರಖ್ಯಾತ ನಟರಾದ ಜೂನಿಯರ್ ಎನ್ ಟಿಆರ್, ನಂದಮೂರಿ ಬಾಲಕೃಷ್ಣ ಅವರು ಶನಿವಾರ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟಿದ್ದಾರೆ.