ಅಪರಾಧ ಸಂಭವಿಸಬಹುದು ಎನ್ನುವ ಬಗ್ಗೆ ಮಾಹಿತಿ ಇದ್ದ ಮಾತ್ರಕ್ಕೆ ಎಫ್ಐಆರ್ ದಾಖಲಿಸುವುದು ಕಡ್ಡಾಯವಲ್ಲ: ಹೈಕೋರ್ಟ್
ಬೆಂಗಳೂರು: ಯಾವುದೇ ಅಪರಾಧ ಸಂಭವಿಸಬಹುದು ಎನ್ನುವ ಬಗ್ಗೆ ಮಾಹಿತಿ ಇದ್ದ ಮಾತ್ರಕ್ಕೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿ ಅದರ ಎಫ್ಐಆರ್ ದಾಖಲಿಸುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಹೇಳಿದೆ.
ಮಾನವ ಕಳ್ಳಸಾಗಣೆಗಾಗಿ ನಕಲಿ ಪಾಸ್‌ಪೋರ್ಟ್ ಸಿದ್ಧಪಡಿಸಿದ ಆರೋಪದಲ್ಲಿ ತಮಗೆ ಅಧೀನ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಪಡಿಸುವಂತೆ ಕೋರಿ ಇಕ್ಬಾಲ್ ಅಹ್ಮದ್ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ನ್ಯಾಯಪೀಠ ಈ ಆದೇಶ ನೀಡಿದೆ.




