ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡುವ ಯಾವುದೇ ಯೋಚನೆ ಕೇಂದ್ರ ಸರ್ಕಾರದ ಬಳಿ ಇಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ.
ಭಾರತೀಯ ರೈಲ್ವೆ ಮಜೂದಾರ್ ಸಂಘದ 20ನೇ ಅಖಿಲ ಭಾರತೀಯ ಸಮ್ಮೇಳನಕ್ಕೆ ಶನಿವಾರ ವರ್ಚುವಲ್ ಆಗಿ ಚಾಲನೆ ನೀಡಿದ ಅವರು ಈ ಮಾತನ್ನು ಹೇಳಿದ್ದಾರೆ.
ವಿರೋಧ ಪಕ್ಷಗಳು ಸುಮ್ಮನೆ ರೈಲ್ವೆ ಖಾಸಗೀಕರಣದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿವೆ. ನಮ್ಮಲ್ಲಿ ಅಂತಹ ಯೋಜನೆಯಿಲ್ಲ. ಬದಲಾಗಿ ನಾವು ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದಾಗಿ ಇಲಾಖೆಯನ್ನು ಇನ್ನಷ್ಟು ಆಧುನೀಕರಣಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.




