February 3, 2026

ಅನಾರೋಗ್ಯವನ್ನು ಗುಣಪಡಿಸುವ ನೆಪದಲ್ಲಿ ಮಹಿಳೆಯ ಅತ್ಯಾಚಾರ: ಮಾಂತ್ರಿಕನ ಬಂಧನ

0
image_editor_output_image661116018-1649633646319.jpg

ಲಖನೌ: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಅನಾರೋಗ್ಯವನ್ನು ಗುಣಪಡಿಸುವ ನೆಪದಲ್ಲಿ ಮಾಂತ್ರಿಕನೊಬ್ಬ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಜಿಲ್ಲೆಯ ಮಂಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಔಷಧಿ ತೆಗೆದುಕೊಂಡರೂ ಅನಾರೋಗ್ಯದಿಂದ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮಾಂತ್ರಿಕನನ್ನು ಸಂಪರ್ಕಿಸಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ತನ್ನ ಕಾಯಿಲೆಗಳನ್ನು ಗುಣಪಡಿಸುವ ನೆಪದಲ್ಲಿ ಆತ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!