August 20, 2026

ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಆರು ಕಾರ್ಮಿಕರು ಮೃತ್ಯು

0
image_editor_output_image-1195611006-1649653286781.jpg

ಭರೂಚ್‌: ಗುಜರಾತ್‌ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಆರು ಕಾರ್ಮಿಕರು ಮೃತಪಟ್ಟಿದ್ದಾರೆ.

ಅಹಮದಾಬಾದ್‌ನಿಂದ 235 ಕಿ. ದೂರದ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಮುಂಜಾನೆ 3 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ.

‘ಮೃತ ಆರು ಮಂದಿಯೂ ರಿಯಾಕ್ಟರ್‌ ಬಳಿ ಕೆಲಸ ಮಾಡುತ್ತಿದ್ದರು. ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆ ವೇಳೆ ಅದು ಏಕಾಏಕಿ ಸ್ಫೋಟವಾಗಿದೆ’ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ.

‘ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಎಲ್ಲಾ ಆರು ಜನರು ಸಾವಿಗೀಡಾಗಿದ್ದಾರೆ. ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ’ ಎಂದು ಅವರು ಹೇಳಿದರು.

ಘಟನೆಯಲ್ಲಿ ಬೇರೆ ಯಾರೂ ಗಾಯಗೊಂಡಿಲ್ಲ ಎಂದು ಎಸ್‌ಪಿ ಲೀನಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!