March 24, 2026

ಮಂಗಳೂರು: ಕೋಳಿ ಮಾಂಸ ಮಾರಾಟದ ಅಂಗಡಿಯ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ: ಇಬ್ಬರು ರೌಡಿಶೀಟರ್ ಗಳ ಬಂಧನ

0
Screenshot_2022-04-11-10-51-13-70_680d03679600f7af0b4c700c6b270fe7.jpg

ಮಂಗಳೂರು: ಕೋಳಿ ಮಾಂಸ ಮಾರಾಟದ ಅಂಗಡಿಯ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ರೌಡಿಶೀಟರ್ ಗಳನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿರುವ ಘಟನೆ ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ರೌಡಿ ಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರೀತಮ್ ಪೂಜಾರಿ (27 ), ಎಕ್ಕೂರು ನಿವಾಸಿ ಧೀರು ಯಾನೆ ಧೀರಜ್ ಕುಮಾರ್ ( 25) ಎಂದು ಗುರುತಿಸಲಾಗಿದೆ.

ಏ.10ರಂದು ಸಂಜೆ ವೆಲೆನ್ಶಿಯಾ ಜಂಕ್ಷನ್ ಬಳಿಯ ಐಡಿಯಲ್ ಚಿಕನ್ ಅಂಗಡಿಯ ಮುಂಭಾಗದಲ್ಲಿ ಆರೋಪಿಗಳಿಬ್ಬರು ಸಾರ್ವಜನಿಕನೊಬ್ಬನಿಗೆ ಹಲ್ಲೆ ನಡೆಸುತ್ತಿದ್ದರು.

ಇದನ್ನು ಅಂಗಡಿ ಸಿಬ್ಬಂದಿಗಳು ಪ್ರಶ್ನಿಸಿದಾಗ ಆರೋಪಿಗಳು ಅಂಗಡಿ ಸಿಬ್ಬಂದಿಗಳಾದ ಸುನಿಲ್ ಮಾರ್ಡಿ, ಅನಂತ ಮತ್ತು ಜೀವನ್ ಎಂಬವರಿಗೆ ಹೆಲ್ಮೆಟ್, ಕಲ್ಲುಗಳಿಂದ ಹೊಡೆದು ಗಾಯಗೊಳಿಸಿದ್ದು, ಬಳಿಕ ಸಿಬ್ಬಂದಿಗೆ ಚೂರಿಯಿಂದ ಇರಿಯಲು ಹೋದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ತಡೆದಿದ್ದಾರೆ.

ಇನ್ನು ಆರೋಪಿಗಳು ಸಾರ್ವಜನಿಕರೊಂದಿಗೆ ಕೂಡ ಜಗಳ ನಡೆಸಿ ಬಿದ್ದು ಗಾಯಗೊಂಡಿದ್ದು, ಈ ಸಮಯದಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!