March 20, 2026

ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ, ಸಿಐಡಿ ತನಿಖೆಗೆ ವಹಿಸಲಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

0
Screenshot_2022-04-11-11-03-44-38_680d03679600f7af0b4c700c6b270fe7.jpg

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿರುವ 545 ಸಬ್‌ಇನ್ಸ್‌ಪೆಕ್ಟರ್‌(ಪಿಎಸ್‌ಐ) ಹುದ್ದೆ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ನಡೆದು ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯೂ ಪ್ರಕಟವಾಗಿದೆ. ಈ ನಡುವೆ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮ ನಡೆದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಕಲಬುರಗಿಯ ಚೌಕ್‌ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ಸಹ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!