March 24, 2026

ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಘರ್ಷಣೆ: ಎಬಿವಿಪಿ ಸಂಘಟನೆಯ ವಿರುದ್ಧ ಎಫ್‌ಐಆರ್ ದಾಖಲು

0
Screenshot_2022-04-11-11-45-31-23_680d03679600f7af0b4c700c6b270fe7.jpg

ನವದೆಹಲಿ: ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಗುಂಪಿನಿಂದ ಪಡೆದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಸೋಮವಾರ ಎಬಿವಿಪಿ ಸಂಘಟನೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಕಾವೇರಿ ಹಾಸ್ಟೆಲ್‌ನಲ್ಲಿ ರಾಮನವಮಿಯಂದು ಮಾಂಸಾಹಾರದ ವಿಚಾರವಾಗಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿತ್ತು. ಹಿಂಸಾಚಾರದಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

‘ಜೆಎನ್‌ಯುಎಸ್‌ಯು, ಎಸ್‌ಎಫ್‌ಐ, ಡಿಎಸ್‌ಎಫ್ ಮತ್ತು ಎಐಎಸ್‌ಎ ಸದಸ್ಯರಾಗಿರುವ ವಿದ್ಯಾರ್ಥಿಗಳ ಗುಂಪು ಅಪರಿಚಿತ ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದೆ. ಅದರಂತೆ, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ.

ವಾಸ್ತವ ಅರಿಯಲು, ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ. ಎಬಿವಿಪಿಗೆ ಸೇರಿದ ವಿದ್ಯಾರ್ಥಿಗಳೂ ದೂರು ನೀಡುವುದಾಗಿ ತಿಳಿಸಿದ್ದಾರೆ. ನಂತರ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ದೆಹಲಿ ನೈರುತ್ಯ ಪೊಲೀಸ್ ಉಪ ಆಯುಕ್ತ ಮನೋಜ್ ಸಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!