ವಿಟ್ಲ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ವಿಟ್ಲ: ನೆಟ್ಲ ಮುಡ್ನೂರು ಗ್ರಾಮದ ಪರ್ಲೋಟ್ಟು ಎಂಬಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.
ನೆಟ್ಲಮುಡ್ನೂರು ಗ್ರಾಮದ ಪರ್ಲೊಟ್ಟು ನಿವಾಸಿ ಶಿವಪ್ಪ ಗೌಡರ ಪುತ್ರ ಜಯಗೌಡ(೪೭) ಮೃತದುರ್ದೈವಿ.
ಏ.9ರಂದು ರಾತ್ರಿ ಪರ್ಲೊಟ್ಟು ಸಮೀಪ ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಜಯಗೌಡರವರು ರಸ್ತೆ ಬದಿಯಲ್ಲಿ ಬಿದ್ದಿದ್ದರು. ಮುಖ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದ್ದ ಅವರನ್ನು ಕೂಡಲೇ ಸ್ಥಳೀಯರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಏ.೧೦ರಂದು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂದಿಸಿದಂತೆ ಕೊಪ್ಪರಿಗೆ ನಿವಾಸಿ ಸಚ್ಚಿದಾನಂದ ರವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





