February 3, 2026

ಕೊನಾರ್ಕ್‌ ಎಕ್ಸ್‌ಪ್ರೆಸ್‌ ರೈಲು ಢಿಕ್ಕಿ: ಐವರು ಪ್ರಯಾಣಿಕರು ಮೃತ್ಯು

0
Screenshot_2022-04-12-04-42-37-46_680d03679600f7af0b4c700c6b270fe7.jpg

ಹೈದರಾಬಾದ್‌: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ಕೊನಾರ್ಕ್‌ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಸಂತ್ರಸ್ತರು ಕೊಯಮತ್ತೂರು–ಸಿಲ್ಚಾರ್‌ ಎಕ್ಸ್‌ಪ್ರೆಸ್‌ ರೈಲಿನಿಂದ ಸಿಗಡಮ್‌–ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಓಡಲು ಪ್ರಯತ್ನಿಸಿದರು. ಆಗ ವೇಗವಾಗಿ ಬಂದ ಭುವನೇಶ್ವರ–ಮುಂಬೈ ಕೊನಾರ್ಕ್‌ ರೈಲಿಗೆ ಸಿಲುಕಿದರು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

ವಿಶಾಖಪಟ್ಟಣ-ಪಲಾಸ ಮುಖ್ಯ ಮಾರ್ಗದ ಮಧ್ಯಭಾಗದಲ್ಲಿ ಘಟನೆ ನಡೆದಿದೆ. ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!