ಈಶ್ವರಪ್ಪ ವಿರುದ್ಧ ಕಮಿಷನ್ ದಂಧೆ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಲಾಡ್ಜ್ ನಲ್ಲಿ ಆತ್ಮಹತ್ಯೆ
ಬೆಳಗಾವಿ: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ 40 % ಕಮಿಷನರ್ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ ಪಾಟೀಲ್ ಮೃತದೇಹ ಉಡುಪಿಯ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ.
ಲಾಡ್ಜ್ ನಲ್ಲಿ ಡೆಟ್ ಡೆತ್ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ. ಅವರಿಗೆ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ.
ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು , ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕು ಎಂದು ಕೂಡ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.




