ಈಶ್ವರಪ್ಪ ವಿರುದ್ಧ ಕೇಸು ದಾಖಲಿಸಿ ಬಂಧಿಸಬೇಕು: ಸಿದ್ದರಾಮಯ್ಯ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪನವರು ನೇರ ಕಾರಣ, ಹೀಗಾಗಿ ಅವರ ವಿರುದ್ಧ ಹತ್ಯೆ ಕೇಸು ದಾಖಲಿಸಿ ಬಂಧಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗ್ರಹ ಮಾಡಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ವಿಷಯ ಹೊರಬರುತ್ತಿದ್ದಂತೆ ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಚಿವ ಈಶ್ವರಪ್ಪನವರು ರಾಜೀನಾಮೆ ನೀಡಬೇಕು, ಸಿಎಂ ಬೊಮ್ಮಾಯಿ ಅವರು ಸಂಪುಟದಿಂದ ವಜಾ ಮಾಡಬೇಕು, ಇಲ್ಲದಿದ್ದರೆ ಮುಖ್ಯಮಂತ್ರಿಗಳ ನಿವಾಸಕ್ಕೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಕೆಂಡಮಂಡಲರಾಗಿದ್ದು, ಸಾಲು ಸಾಲು ಆರೋಪ ಮಾಡಿದ್ದಾರೆ.




